ಕೆ.ಆರ್.ಪುರಂನಲ್ಲಿ ಸಂಬಳ ಕೇಳಿದ ಪೌರ ಕಾರ್ಮಿಕರ ಮೇಲೆ ಗುತ್ತಿಗೆದಾರ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇವತ್ತು ಬೆಂಗಳೂರಿನ ಬಿಬಿಎಂಪಿ ಕಚೇರಿಯಲ್ಲಿ ಪೌರಕಾರ್ಮಿಕರು ಪ್ರತಿಭಟಿಸಿದ್ರು..ಬೆಂಗಳೂರಿನ ಸ್ವಚ್ಛತೆಯಲ್ಲಿ ತೊಡಗಿರುವ ಪೌರ ಕಾರ್ಮಿಕರಿಗೆ ಭದ್ರತೆ ಇಲ್ಲದಂತಾಗಿದೆ. ಮಹಿಳಾ ಪೌರ ಕಾರ್ಮಿಕರ ಮೇಲೆ ಗುತ್ತಿಗೆದಾರರ ದೌರ್ಜನ್ಯ ಎಸಗುತ್ತಿದ್ದಾರೆ. ಏಪ್ರಿಲ್‌ನಲ್ಲಿ ಪೀಣ್ಯದಲ್ಲಿ ದಲಿತ ಮಹಿಳಾ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆದಿತ್ತು. ಇದೀಗ ಕೆ.ಆರ್‌ಪುರಂನಲ್ಲಿ ಗುತ್ತಿಗೆದಾರ ನಾಗೇಶ್ ಎಂಬಾತ ಪೌರ ಕಾರ್ಮಿಕರಿಗೆ ಕಿರುಕುಳ ನೀಡಿದ್ದಾನೆ. 2 ತಿಂಗಳ ವೇತನ ನೀಡುವಂತೆ ಕೇಳಿದ್ದಕ್ಕೆ ರಾಡ್ ತೋರಿಸಿ ಹಲ್ಲೆಗೆ ಯತ್ನಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಹೀಗಾಗಿ, ಗುತ್ತಿಗೆದಾರ ನಾಗೇಶ್ ಹಾಗೂ ಸಹಚರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಇವತ್ತು ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದ್ರು...