ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ಇಂದು ಆರೋಗ್ಯ ಸಚಿವ ಶ್ರೀರಾಮುಲು ಅದ್ಧೂರಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ವೇದಾವತಿ ನದಿಗೆ ಬಾಗಿನ ಅರ್ಪಣೆಗೆ ಆಗಮಿಸಿದ್ದ ಶ್ರೀರಾಮುಲು, ಎತ್ತಿನ ಗಾಡಿ ಏರಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಪಾಲಿಸದೆ ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮಾಡಿದ್ದಾರೆ.ಈ ವೇಳೆ ನೂರಾರು ಜನರ ಮಧ್ಯೆ ಸಚಿವರಿಗೆ ಕಾರ್ಯಕರ್ತರು ಕ್ರೇನ್ ಮೂಲಕ ಸೇಬಿನ ಹಾರ, ಜೆಸಿಬಿ ಮೂಲಕ ಹೂವು ಹಾಕಿದ್ದಾರೆ. ಸ್ವತಃ ಸಚಿವರು ಲಾಕ್ಡೌನ್ ನಿಯಮಗಳನ್ನು ಗಾಳಿಗೆ ತೂರಿದ್ದು, ಮಾತ್ರವಲ್ಲದೆ ಸಚಿವರ ಸಮ್ಮುಖದಲ್ಲೇ ನೂರಾರು ಜನ ಕಾನೂನನ್ನು ಮರೆತಿದ್ದಾರೆ. ಸಚಿವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
Health Minister Sriramulu today joined the hundreds of activists in Parasurampura village of Chalakkere taluk in chitradurga district. Not only did the minister himself wind up the lockdown rules, but hundreds of people had forgotten the law in the presence of the minister. There is great opposition to the minister's move.