ಫೋರ್ಡ್ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಕಾರುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ. ವಿಶ್ವದಾದ್ಯಂತವಿರುವ ಹಲವು ತಯಾರಕ ಕಂಪನಿಗಳಂತೆ ಫೋರ್ಡ್ ಕಂಪನಿಯು ಸಹ ಸೆಮಿಕಂಡಕ್ಟರ್'ಗಳ ಕೊರತೆಯನ್ನು ಎದುರಿಸುತ್ತಿದೆ.
ಸೆಮಿಕಂಡಕ್ಟರ್ ಕೊರತೆಯ ಹಿನ್ನೆಲೆಯಲ್ಲಿ ಚೆನ್ನೈ ಹಾಗೂ ಸನಂದ್‌ನಲ್ಲಿರುವ ಕಂಪನಿಯ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ. ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿರುವ ಘಟಕವನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು.
ಸೆಮಿಕಂಡಕ್ಟರ್'ಗಳ ಕೊರತೆಯ ಹಿನ್ನೆಲೆಯಲ್ಲಿ ಈ ಘಟಕವನ್ನು ಜನವರಿ 24ರವರೆಗೆ ಸ್ಥಗಿತಗೊಳಿಸಲಾಗಿದೆ.
ಫೋರ್ಡ್ ಕಂಪನಿಯ ಉತ್ಪಾದನೆಯ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.